ಸ್ಯಾಂಡಲ್ ವುಡ್ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಅವರು ಇದೀಗ ವಂಚಕ ಯುವರಾಜನ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಕೆಲವು ದಿನಗಳಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮಕ್ಕೆ ಕುಮಾರಸ್ವಾಮಿ ಭೇಟಿ ಕೊಟ್ಟಿದ್ದರು. ಈ ವೇಳೆ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ವಿಚಾರವಾಗಿ ಮಾಧ್ಯಮದವರು ಎಚ್ ಡಿಕೆಗೆ ಅಭಿಪ್ರಾಯ ಕೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ, ಯಾರಪ್ಪ ಅದು.. ಅವರು ಯಾರು ಅಂತ ಗೊತ್ತಿಲ್ಲ.. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ. ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಮುಂದೆ ಹೆಜ್ಜೆ ಇಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


