ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ಸಂವಿಧಾನ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಯನ್ನು ಡಿಕೆಶಿ ತೀವ್ರವಾಗಿ ಖಂಡಿಸಿದ್ದಾರೆ. ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆ ನೋಡಿದರೆ, ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಂತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


