ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದ್ದು ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), 2019ರ ಅನುಷ್ಠಾನದ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ, ದೆಹಲಿಯ ಹಲವಾರು ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ನಗರ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಸಿಬ್ಬಂದಿಯ ತೀವ್ರ ಗಸ್ತು ವ್ಯವಸ್ಥೆ ಮಾಡಲಾಗಿದೆ.
ಈ ಹಿಂದೆ 2020ರಲ್ಲಿ, ಸಿಎಎ ಮತ್ತು ಎನ್ ಆರ್ ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಘೋಷಣೆಯ ವಿರುದ್ಧ ರಾಜಧಾನಿಯಲ್ಲಿ ಗಲಭೆಗಳು ನಡೆದಿದ್ದವು, ಈ ಗಲಭೆಯು 53 ಜನರ ಸಾವಿಗೆ ಕಾರಣವಾಗಿತ್ತು ಮತ್ತು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಈ ರೀತಿಯ ದುರ್ಘಟನೆ ಮತ್ತೆ ಮರುಕಳಿಸಬಾರದು ಎಂಬ ಕಾರಣಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಸಶಸ್ತ್ರ ತುಕಡಿಗಳನ್ನು ಕೇಂದ್ರ ಸರ್ಕಾರ ನಿಯೋಜನೆ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


