ಲೋಕಸಭಾ ಚುನಾವಣಾ ಕಾವು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಇದೀಗ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತಮೂಲಗಳು ತಿಳಿಸಿವೆ.
ಗುಲ್ಬರ್ಗಾ ಕ್ಷೇತ್ರಕ್ಕಾಗಿ ಕಳೆದ ವಾರ ಚರ್ಚಿಸಲಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಖರ್ಗೆ ಅವರು ಸರ್ವಾನುಮತದ ಹೆಸರಾಗಿದ್ದರು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣನ್ ದೊಡ್ಡಮಾನಿಯನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಖರ್ಗೆ ಅವರು ಗುಲ್ಬರ್ಗಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದರು ಆದರೆ 2019ರಲ್ಲಿ ಸೋಲನ್ನು ಅನುಭವಿಸಿದ್ದರು. ಅಂದಿನಿಂದ ಅವರು ರಾಜ್ಯಸಭೆಯಲ್ಲಿದ್ದು, ಮೇಲ್ಮನೆಯಲ್ಲಿ ಅವರಿಗೆ ಇನ್ನೂ ನಾಲ್ಕು ವರ್ಷಗಳ ಕಾಲಾವಧಿಯನ್ನು ಹೊಂದಿದ್ದಾರೆ.
ಖರ್ಗೆ ಅವರು ಇತ್ತೀಚಿಗೆ ” ನಾನು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗಿರಲು ಬಯಸುವುದಿಲ್ಲ ಆದರೆ ದೇಶದಾದ್ಯಂತ ಗಮನ ಕೇಂದ್ರೀಕರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥರು ಚುನಾವಣೆಯಲ್ಲಿ ಸ್ಪರ್ಧಿಸದಿರುವ ಬಗ್ಗೆ ಕಾಂಗ್ರೆಸ್ ಇದುವರೆಗೂ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ಇದೀಗ ಖರ್ಗೆಯವರ ಮೂಲಗಳು ಹೇಳಿರುವ ಪ್ರಕಾರ ಈ ಬಾರಿಯ ಚುನಾವಣೆಯಲ್ಲಿ ಅವರು ಅಧಿಕೃತವಾಗಿ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


