ಮೈಸೂರು: ದೇವೇಗೌಡರ ಕುಟುಂಬದವರ ಜೊತೆಗೆ ನನ್ನದು ಸೈದ್ಧಾಂತಿಕ ವಿರೋಧವಷ್ಟೆ, ಆರ್‌ಎಸ್‌ಎಸ್ ಅನ್ನು ಟೀಕಿಸುವ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಸರ್ಕಾರ ರಚಿಸಿದ್ದನ್ನು ಹಾಗೂ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಳ್ಳುವುದನ್ನು ವಿರೋಧಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯು ಮುಸ್ಲಿಮರು ಮತ್ತು ಕ್ರೈಸ್ತರನ್ನು ಗುರಿಯಾಗಿಟ್ಟುಕೊಂಡ ಹುನ್ನಾರ. ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಆಕ್ರೋಶವಿರುವುದರಿಂದ ಹಿಂದುತ್ವದ ಪ್ರತಿಪಾದನೆ ಮೂಲಕ ಮತಗಳಿಸುವ ಪ್ರಯತ್ನಕ್ಕೆ ನಡೆದಿದೆ ಎಂದು ಅವರು ಆರೋಪಿಸಿದರು.
ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇ ನಮ್ಮ ಸರ್ಕಾರ. ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಡಿ.ಕೆ.ಶಿವಕುಮಾರ್ ಜತೆ ನಾನೂ ಪಾದಯಾತ್ರೆಗೆ ಹೋಗುತ್ತೇನೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಹೇಳುತ್ತಾರಷ್ಟೇ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700