ತುಮಕೂರು: ಕಾರವಾರ ಸಂಸದ ಅನಂತ್ ಕುಮಾರ್ ಹೆಗಡೆ ಪತ್ರಕರ್ತರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ಕೊಟ್ಟಿರುವುದನ್ನು ಖಂಡಿಸಿ, ತುಮಕೂರು ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
ಜಿಲ್ಲಾ ಕಾರ್ಯನಿರತ ಪತ್ರಿಕೆ ಸಂಘದ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಸಂಸದ ಅನಂತ್ ಕುಮಾರ್ ಹೆಗಡೆ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವ ಕುರಿತು ಸರ್ಕಾರವನ್ನು ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಏಕೇಶ್ ರಘುರಾಮ್, ಸತೀಶ್, ನಾಗರಾಜ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


