ಕಲಬುರಗಿ: ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲಿ ಜನ ಮೆಚ್ಚಿದ್ದಾರೆ. ಬಿಜೆಪಿಯವರು ಒಪ್ಪಿ ಮೋದಿ ಗ್ಯಾರಂಟಿ ಯೋಜನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದರು.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ ಎಂದರು.
ಬೆಳಗಾವಿಯಲ್ಲಿ ಪ್ರಜಾಧ್ವನಿ ಪ್ರಾರಂಭಿಸಿದ ನಂತರ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್ ನಲ್ಲಿ ಇದಕ್ಕಾಗಿ 52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ನುಡಿದ ಡಿಕೆಶಿ, ಮತದಾರರು ಹಾಗೂ ಕಾಂಗ್ರೆಸ್ ನಾಯಕರು ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು, ನಾವು ನಾಯಕರು ನೆಪ ಮಾತ್ರ. ನಾವು ಪ್ರತಿ ತಾಲೂಕು, ಜಿಲ್ಲೆಗಳಲ್ಲಿ 15 ಕಾರ್ಯಕರ್ತರನ್ನು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ ಎಂದರು.
ನಾವು ಚುನಾವಣೆಗಾಗಿ ಗ್ಯಾರಂಟಿ ಯೋಜನೆ ನೀಡುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕಿನಲ್ಲಿ ನೆರವು ನೀಡಲು ಜಾರಿ ಮಾಡಿದ್ದೇವೆ ಎಂದು ಡಿಕೆಶಿ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


