ಬೆಂಗಳೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಸಿಗದಿರುವುದು ಬಹುತೇಕ ಖಚಿತವಾಗುಗಿದೆ. ಈ ಹಿನ್ನೆಲೆ ಅವರ ಅಭಿಮಾನಿಗಳು ಮೈಸೂರಿನಲ್ಲಿ ಟಿಕೆಟ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್. ಅಶೋಕ್, “ಪ್ರತಾಪ್ ಸಿಂಹ ತಾಳ್ಮೆಯಿಂದರಬೇಕು. ಧೃತಿಗೆಡುವ ಅಗತ್ಯವಿಲ್ಲ. ಇನ್ನು ಯಾವುದು ನಿರ್ಧಾರವಾಗಿಲ್ಲ” ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಇನ್ನೂ ದೃಢಪಡದ ಕಾರಣ ಪ್ರತಾಪ್ ಸಿಂಹ ಧೃತಿಗೆಡುವ ಅಗತ್ಯವಿಲ್ಲ, ತಾಳ್ಮೆಯಿಂದಿರಬೇಕು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ವರಿಷ್ಠರು ಮೈಸೂರು ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಟಿಕೆಟ್ ಯಾರಿಗೆ ಸಿಕ್ಕರೂ ಜಿಲ್ಲಾ ಘಟಕದ ಕಾರ್ಯಕರ್ತರೆಲ್ಲ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ ಮತ್ತು ಪ್ರತಾಪದ ಸಿಂಹ ಸಹ ಅಭ್ಯರ್ಥಿಯ ಪರ ಕರಪತ್ರಗಳನ್ನು ಹಂಚುವುದಾಗಿ ಹೇಳಿದ್ದಾರೆ ಎಂದು ಆಶೋಕ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


