ಬಾಲಿವುಡ್ ನಟಿಯರನ್ನು ಡೀಪ್ ಫೇಕ್ ತಂತ್ರಜ್ಞಾನದ ದುರ್ಬಳಕೆ ಮಾಡುವವರು ಮತ್ತೆ ಮತ್ತೆ ಕಾಡುತ್ತಿದ್ದಾರೆ. ಇತ್ತೀಚೆಗೆ ಈ ವಿಷಯವಾಗಿ ಭಾರಿ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ವಿಷಯದಲ್ಲಿ ಆರೋಪಿಯನ್ನು ಸೆರೆಹಿಡಿಯಲಾಗಿತ್ತು. ಡೀಪ್ ಫೇಕ್ ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದು ಹಲವರು ಹೇಳಿಕೊಳ್ಳದೆ ಸುಮ್ಮನಿದ್ದಾರೆ ಎನ್ನಲಾಗಿದೆ.
ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್ ಫೇಕ್ ವೀಡಿಯೋ ವೈರಲ್ ಆಗಿದೆ. ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವೀಡಿಯೋ ವೈರಲ್ ಮಾಡಿದ್ದಾರೆ. ರಶ್ಮಿಕಾ ಹೊಸ ಡೀಪ್ ಫೇಕ್ ವೀಡಿಯೋದಲ್ಲಿ ಯುವತಿಯೊಬ್ಬರು ಡ್ಯಾನ್ಸ್ ಮಾಡುತ್ತಿದ್ದಾರೆ. ಯಾರದೊ ಯುವತಿಯ ದೇಹಕ್ಕೆ ರಶ್ಮಿಕಾ ಮುಖ ಎಡಿಟ್ ಮಾಡಲಾಗದೆ. ಈ ವೀಡಿಯೋ ವೈರಲ್ ಆಗ್ತಿದ್ದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಡೀಪ್ ಫೇಕ್ ವೀಡಿಯೋ ಮಾಡಬೇಡಿ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


