ಕೊರಟಗೆರೆ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿಯೇ ಎರಡು ಕೆ ಎಸ್ ಆರ್ ಟಿಸಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಗೌರಿಬಿದನೂರು ನಿಂದ ತುಮಕೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕೊರಟಗೆರೆಯ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ತುಮಕೂರಿನಿಂದ ಪಾವಗಡ ಕಡೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನ ಕೊರಟಗೆರೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾನೆಟ್ ಮೇಲೆ ಕುಳಿತು ನಿದ್ರೆ ಮಾಡುತ್ತಿದ್ದ ಮಹಿಳೆಯರಿಂದ ಈ ಅಪಘಾತ ಜರುಗಿದೆ ಎಂದು ಬಸ್ ಚಾಲಕ ಹೇಳಿದ್ದು, ಬಾನೆಟ್ ಮೇಲೆ ಕುಳಿತುಕೊಳ್ಳಬೇಡಿ ಹಿಂದೆ ಹೋಗಿ ಎಂದು ಹೇಳುವಷ್ಟರಲ್ಲಿ ಅಪಘಾತ ನಡೆದು ಹೋಗಿತ್ತು ಎಂದು ಹೇಳಿದ್ದಾರೆ.
ಕೊರಟಗೆರೆಯ KSRTCಬಸ್ ನಿಲ್ದಾಣದಲ್ಲಿರುವ ಸಂಚಾರ ನಿಯಂತ್ರಣ ಸಿಬ್ಬಂದಿಯ ನಿರ್ಲಕ್ಷದಿಂದ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ನಿಲ್ದಾಣದಲ್ಲಿ ಹೆಚ್ಚು ಬಸ್ ಗಳು ನಿಂತಾಗ ಹಿಂದೆ ಬರುವ ಬಸ್ ಗಳಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಬೇಕು. ಆದರೆ ಯಾವುದೇ ಸಿಗ್ನಲ್ ಇಲ್ಲದೇ ಎರಡು ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


