ಮಧುಗಿರಿ: ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಗೊಲ್ಲ-ಕಾಡುಗೊಲ್ಲರ ಅಭಿವೃದ್ಧಿ ನಿಗಮ ಎಂದು ಮರು ಆದೇಶ ಮಾಡಿರುವುದನ್ನು ತಡೆಹಿಡಿಯಬೇಕು ಎಂದು ಕಾಡುಗೊಲ್ಲರ ಸಂಘದ ವತಿಯಿಂದ ತಹಸಿಲ್ದಾರ್ ವೈ.ರವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ.ಎಂ.ಈರಣ್ಣ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬುಡಕಟ್ಟು ನೆಲೆಯುಳ್ಳ ಕಾಡುಗೊಲ್ಲರು ಆರ್ಥಿಕವಾಗಿ ಹಿಂದುಳಿದಿರುವುದನ್ನು ಮನಗಂಡು ಕಾಡುಗೊಲ್ಲರು ಆರ್ಥಿಕವಾಗಿ ಮುಂದೆ ಬರಬೇಕು ಎಂಬ ಸದುದ್ದೇಶದಿಂದ ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಸ್ಥಾಪನೆಮಾಡಿ ಆದೇಶ ಹೊರಡಿಸಿದ್ದರು. ಆದರೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ.ಪೂರ್ಣಿಮಾ ಅವರು ಗೊಲ್ಲಾ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡಬೇಕು ಎಂದು ಪತ್ರ ಬರೆದಿದ್ದು, ಈ ಸಂಬಂಧ ಸರ್ಕಾರದ ಆಪ್ತ ಕಾರ್ಯದರ್ಶಿಯವರು ಮರು ನಾಮಕರಣ ಮಾಡಲು ಆದೇಶ ಹೊರಡಿಸಿದ್ದಾರೆ, ಆದ್ದರಿಂದ ಕೂಡಲೇ ಈ ಆದೇಶವನ್ನು ತಡೆಹಿಡಿಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುತ್ತುರಾಜ್, ಚಿತ್ತಪ್ಪ, ಈರ ದಾಸಪ್ಪ, ಗೌಡ ಮುದ್ದಯ್ಯ ಹಾಗೂ ಪೂಜಪ್ಪ ಇದ್ದರು.
ವರದಿ: ಅಬಿದ್, ಮಧುಗಿರಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700