ಬೆಂಗಳೂರು: ಬಿಜೆಪಿಯವರು ನಮಗೆ ಹಾಸನ, ಮಂಡ್ಯಮತ್ತು ಕೋಲಾರ ಬಿಟ್ಟುಕೊಟ್ಟಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, 28 ಸ್ಥಾನಗಳ ಪೈಕಿ 25ರಲ್ಲಿ ಬಿಜೆಪಿ ಅಭ್ಯರ್ಥಿಗಳಿರಲಿದ್ದಾರೆ.
ಮಂಜುನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸೋಣ ಎಂದು ಅವರೇ ಒತ್ತಾಯಿಸಿದ್ದಕ್ಕೆ ಹೆಚ್ ಡಿ ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದರು. ಹೆಚ್ ಡಿಕೆ & ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರವೂ ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ.
ಇನ್ನು ಮಂಜುನಾಥ್ ಅವರ ಸ್ಪರ್ಧೆ ವಿಚಾರವಾಗಿ ಹಾಸನದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾವ್ಯಾರೂ ಅವರನ್ನ ರಾಜಕೀಯಕ್ಕೆ ತರೋ ಚಿಂತೆಯೇ ಇರಲಿಲ್ಲ. ಆದ್ರೆ ಬಿಜೆಪಿ ಹೈಕಮಾಂಡ್ ನಮ್ಮ ಮೇಲೆ ಒತ್ತಡ ಹೇರಿ, ಸ್ಪರ್ಧೆ ಮಾಡುವಂತೆ ಮನವೊಲಿಸಲು ಹೇಳಿತ್ತು ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


