ಬೆಂಗಳೂರು: ಮೈಸೂರು- ಕೊಡಗು ಲೋಕಸಭಾ ಟಿಕೆಟ್ ಘೊಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಿಜೆಪಿ ಕಚೇರಿಗೆ ಆಗಮಿಸಿ ಹಿರಿಯ ಮುಖಂಡರನ್ನು ಭೇಟಿಯಾಗಿದ್ದಾರೆ.
ಕಚೇರಿಗೆ ಆಗಮಿಸಿದ ಯದುವೀರ್ ಗೆ ಆರತಿಯಲ್ಲಿ ಸ್ವಾಗತಿಸಲಾಗಿದೆ. ಇನ್ನು ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ನಾನು ಅವರ ಜೊತೆ ಸಂಪರ್ಕದಲ್ಲಿದ್ದೇನೆ, ಅವರ ಬೆಂಬಲ ನನಗಿದೆ ಎಂದು ಹೇಳಿದ್ದಾರೆ.
ಪ್ರತಾಪ್ ಸಿಂಹ ಮೈಸೂರು ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ, ಒಳ್ಳೆಯ ಅಡಿಪಾಯ ಹಾಕಿದ್ದಾರೆ, ಅವರ ಸಹಕಾರ ಮುಂದುವರೆಯಲಿದೆ ಎಂದು ಹೇಳಿದರು. ಇನ್ನು ರಾಜಕೀಯ ಪ್ರವೇಶ ಬಗ್ಗೆ ಮಾತನಾಡಿದ ಅವರು ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


