ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ಪ್ರತಿ ಲೀಟರ್ ಗೆ ಎರಡು ರೂಪಾಯಿ ಇಳಿಕೆಯಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಹೊಸ ದರ ಜಾರಿಯಾಗಲಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದೆ.
ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ ಟ್ವಿಟ್ಟರ್ ಅವರ ಪೋಸ್ಟ್ ನಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರೂ. ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಕುಟುಂಬದ ಕಲ್ಯಾಣ ಮತ್ತು ಸೌಕರ್ಯವನ್ನು ತಮ್ಮ ಗುರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (14.2 ಕೆಜಿ) ಮೇಲೆ ರೂ. 100 ಕಡಿಮೆ ಮಾಡಲಾಗಿತ್ತು. ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


