ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಕಾವು ಹೆಚ್ಚುತ್ತಿರುವ ಹಿನ್ನೆಲೆ ಇದೀಗ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಒಂದು ಹೇಳಿಕೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ.
ಬಿಜೆಪಿಯಲ್ಲಿನ 10 ಮಂದಿ ಹಾಲಿ ಸಂಸದವರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಆಗ ಹೇಳಿದ್ದೆ, ಅದು ಈಗ ಸತ್ಯವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರು ಕಾಂಗ್ರೆಸ್ ನತ್ತ ಮುಖ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.
ಕಾಂಗ್ರೆಸ್ ಗೆಲುವಿಗೆ ಬಿಜೆಪಿ ಟಿಕೆಟ್ ವಂಚಿತರ ಸೇರ್ಪಡೆ ಸದ್ಯಕ್ಕೆ ಗುಟ್ಟಾಗಿಯೇ ಇರಲಿ. ಮುಂದಿನ ದಿನಗಳಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರ್ಪಡೆಗೊಳ್ಳಲು ಇಚ್ಚಿಸಿದರೆ ಅವರಿಗೆ ಖಂಡಿತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಸದ್ಯಕ್ಕೆ ಬಿಜೆಪಿ ಪಕ್ಷದ ಬೆಳವಣಿಗೆಯನ್ನು ಕಾದು ನೋಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಬಿಜೆಪಿ ರೆಬೆಲ್ ನಾಯಕರು ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


