ಬೆಂಗಳೂರು: ಕೊವಿಡ್ 19 ಮತ್ತು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚರ್ಚೆ ನಡೆಸಿದರು.
ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ 19 ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಂದಿನ ಪರಿಸ್ಥಿತಿ ನೋಡಿಕೊಂಡು ಕಠಿಣ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಯ ಬಗ್ಗೆ ನಿರ್ಧಾರ ಮಾಡಲಾಗುವುದು ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತದೆ. ಮೂವರಿಗೆ ಕೊರೊನಾ ಪಾಸಿಟಿವ್ ಬಂದರೆ, ಕ್ಲಸ್ಟರ್ ಮಾಡುತ್ತೇವೆ. ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಇದೇ ವೇಳೆ ಸಿಎಂ ತಿಳಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700