ಭಾರತೀಯ ಮೂಲದ ಕುಟುಂಬವೊಂದು ಕೆನಡಾದ ಒಟಾರಿಯೊದಲ್ಲಿ ನಿಗೂಢವಾಗಿ ಮೃತ ಹೊಂದಿದ ಘಟನೆಯೊಂದು ನಡೆದಿದೆ. ಮೃತರನ್ನು ರಾಜೀವ್ ವಾರಿಕೂ(51), ಪತ್ನಿ ಶಿಲ್ಪಾ ಕೋಥಾ(47) ಮತ್ತು ಮಗಳು ಮಾಹೆಕ್ ವಾರಿಕೊ(16) ಎಂದು ಗುರುತಿಸಲಾಗಿದೆ.
ಕೆನಡಾದ ಒಂಟಾರಿಯೊದಲ್ಲಿ ಈ ಕುಟುಂಬ ವಾಸವಾಗಿತ್ತು. ಮನೆಗೆ ಬೆಂಕಿ ತಗುಲಿ ಮೂವರು ಮೃತ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎನ್ನುವುದು ಇನ್ನೂ ನಿಗೂಢವಾಗಿದೆ ಎನ್ನುತ್ತಾರೆ ಪೊಲೀಸರು.
ಮೂಲಗಳ ಪ್ರಕಾರ ಈ ಕುಟುಂಬ ಹದಿನೈದು ವರ್ಷಗಳಿಂದ ಇಲ್ಲೇ ವಾಸವಾಗಿತ್ತು. ಕುಟುಂಬದವರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡದ್ದನ್ನು ಕಂಡು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸುಟ್ಟು ಕರಕಲಾದ ಮನೆಯ ಅವಶೇಷಗಳ ಅಡಿಯಲ್ಲಿ ಮೂರೂ ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


