ತುಮಕೂರು: ಇತ್ತೀಚಿಗಷ್ಟೇ ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ, ತುಮಕೂರು ನಗರದ ಕುಡಿಯುವ ನೀರಿನ ಉಪಯೋಗಕ್ಕಾಗಿ ಬಿಡುಗಡೆಗೊಳಿಸಲಾಗಿರುವ ನೀರಿನ ಪ್ರಮಾಣದ ಕುರಿತು, ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಇಂದು ಭುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳು ಸ್ಥಳದಲ್ಲಿದ್ದು ಸಚಿವ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಹಣವನ್ನು ಬಿಡುಗಡೆ ಮಾಡದೇ ಅನ್ಯಾಯ ಎಸೆಗಲಾಗಿದೆ. ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿ, ಉದ್ಯೋಗ ನಷ್ಟ ಬೆಳೆ ನಷ್ಟ ಸೇರಿದಂತೆ ಅನೇಕ ನಷ್ಟವನ್ನು ಸರಿದೂಗಿಸಲು 36,000 ಕೋಟಿ ಅಂದಾಜು ಮಾಡಲಾಗಿದೆ ಆದರೆ ಅದರಲ್ಲಿ ಅರ್ಧ ಭಾಗ ಕನಿಷ್ಠ 18000 ಕೋಟಿ ಹಣವನ್ನು ಕೇಳಲಾಗಿತ್ತು ಅದನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


