ಬೆಂಗಳೂರು: ಬೆಂಗಳೂರಿನ ತಿಲಕ್ ನಗರದಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಅದಕ್ಕೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ. ವೆಂಕಟೇಶ್(53) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಕೆಲಸ ಮುಗಿಸಿಕೊಂಡು ವೆಂಕಟೇಶ್ ಅವರು, ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಕಾರಿನೊಳಗಿದ್ದವರು ದಿಢೀರ್ ಆಗಿ ಬಾಗಿಲು ತೆರೆದಿದ್ದಾರೆ. ಇದರಿಂದ ಕಾರಿನ ಬಾಗಿಲು ವೆಂಕಟೇಶ್ ತಲೆಗೆ ತಾಗಿ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೈಕೊಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


