ಕಲಬುರ್ಗಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಲ್ಲಲು ಯಾರೂ ರೆಡಿಯಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗೆಸ್ ನ ಯಾವುದೇ ಅಭ್ಯರ್ಥಿಗಳು ನಿಲ್ಲಲು ರೆಡಿಯಿಲ್ಲ.
ಯುದ್ಧಕ್ಕೆ ಮುನ್ನವೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಮೋದಿಯಿಂದ ಮಾತ್ರ ಈ ದೇಶದ ರಕ್ಷಣೆ ಸಾಧ್ಯ. ಒಂದೇ ಒಂದು ಕಾಳು ಅಕ್ಕಿಯನ್ನು ಸಿಎಂ ಸಿದ್ದರಾಮಯ್ಯ ಕೊಟ್ಟಿಲ್ಲ. ಅದನ್ನು ಕೊಟ್ಟಿದ್ದು ನರೇಂದ್ರ ಮೋದಿ ಎಂದು ಹೇಳಿದರು.
ಸಿದ್ದರಾಮಯ್ಯ ಅನ್ನ ನೀಡಲು ಬಂದಿಲ್ಲ, ಕನ್ನ ಹಾಕಲು ಬಂದಿದ್ದಾರೆ. ಲೂಟಿ ಮಾಡಲು ಸಿದ್ದರಾಮಯ್ಯ ಬಂದಿರುವುದು. ಸಿದ್ದರಾಮಯ್ಯ ಕಾಲಿಟ್ಟಿದ್ದೇ ಇಟ್ಟಿದ್ದು, ಬರಗಾಲ ಆರಂಭವಾಗಿದೆ. ಈ ಹಿಂದೆಯೂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬರಗಾಲ ಬಂದಿತ್ತು. ಆಮೇಲೆ ಯಡಿಯೂರಪ್ಪ ಸಿಎಂ ಆದಾಗ ಎಲ್ಲೆಲ್ಲೂ ಮಳೆ. ಸಿದ್ದರಾಮಯ್ಯನವರೇ ನಿಮಗೆ ಆತ್ಮಸಾಕ್ಷಿ ಇದ್ದರೆ ಅಭಿವೃದ್ಧಿಗೆ ಒಂದು ರೂಪಾಯಿ ಕೊಟ್ಟಿದ್ದೀರಾ ಹೇಳಿ? ಎಂದು ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


