ಉತ್ತರ ಪ್ರದೇಶದಲ್ಲಿ 18 ವರ್ಷದ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ನಡೆದಿದೆ. ನೆರೆಹೊರೆಯವರ ನಿರಂತರ ಕಿರುಕುಳ ತಾಳಲಾರದೆ ಯುವತಿ ಸಾವಿಗೆ ಶರಣಾಗಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ.
ಉತ್ತರಪ್ರದೇಶದ ಫತೇಪುರದಲ್ಲಿ ಶನಿವಾರ ಈ ಘಟನೆ ನಡೆದಿದೆ. ಯುವತಿ ಮತ್ತು ಆಕೆಯ ಕುಟುಂಬ ಫತೇಪುರ್‌ನ ಹುಸೈಂಗಂಜ್ ನಲ್ಲಿ ವಾಸಿಸುತ್ತಿದ್ದರು. ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ಯುವತಿ ಸಾವಿಗೆ ಶರಣಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.
ಇಬ್ಬರು ವ್ಯಕ್ತಿಗಳು ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಮಗಳು ಮನೆಯಿಂದ ಹೊರಟಾಗಲೆಲ್ಲ ಅವಳಿಗೆ ತೊಂದರೆಯಾಗುತ್ತದೆ. ಅತ್ಯಾಚಾರ ಯತ್ನವೂ ನಡೆದಿದೆ ಎಂದು ಕುಟುಂಬದವರು ಹೇಳಿದ್ದಾರೆ.
ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಪೂರ್ಣಗೊಳಿಸಿದೆ. ಪೋಷಕರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ವಿಸ್ತೃತ ತನಿಖೆ ಆರಂಭಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಶಂಕರ್ ಮಿಶ್ರಾ ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೆ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸಂತ್ರಸ್ತೆಯ ಕುಟುಂಬಸ್ಥರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


