ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೌತಮ್ ನ ಮೋಹನ್‌ಪುರ ಢಮಾರಾದಿಂದ ಮದುವೆ ಮುಗಿಸಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಪರ್ಬಟ್ಟಾ ಬ್ಲಾಕ್ ನ ಬೆಸಾ ಗ್ರಾಮದ ನಿವಾಸಿ ಇಂದ್ರದೇವ್ ಠಾಕೂರ್ ಅವರ ಪುತ್ರನ ಮದುವೆಗೆ ತೆರಳಿ ಮದುವೆ ಮೆರವಣಿಗೆ ವಾಪಸಾಗುತ್ತಿತ್ತು ಎನ್ನಲಾಗಿದೆ.
ಮಾಹಿತಿ ಪ್ರಕಾರ, ಮದುವೆ ಮೆರವಣಿಗೆಯು ಪರ್ಬಟ್ಟಾದ ಬಿಥಾಲ ಗ್ರಾಮದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ್ದ ಟ್ರ್ಯಾಕ್ಟರ್‌ಗೆ ಎಸ್‌ಯುವಿ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಎಕ್ಸ್ ಯುವಿಯಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗ್ಗೆ (ಇಂದು) 6:30ಕ್ಕೆ ಘಟನೆ ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ.
ಪ್ರಕರಣದ ತನಿಖೆ ನಡೆಯುತ್ತಿದೆ. ಇದೀಗ ಅಪಘಾತದಲ್ಲಿ ಗಾಯಗೊಂಡಿರುವ ನಾಲ್ವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


