ದಕ್ಷಿಣ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಬಸ್, ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ. ಕಳಪೆ ರಸ್ತೆಗಳು, ಅಜಾಗರೂಕ ಚಾಲನೆ ಮತ್ತು ನಿಯಮಗಳ ಕೊರತೆಯಿಂದಾಗಿ ಮಾರಣಾಂತಿಕ ರಸ್ತೆ ಅಪಘಾತಗಳು ದೇಶದಲ್ಲಿ ಸಾಮಾನ್ಯವಾಗಿದೆ.
ಹೆಲ್ಮಂಡ್ ಪ್ರಾಂತ್ಯದ ಗ್ರಿಷ್ಕ್ ಜಿಲ್ಲೆಯ ಹೆರಾತ್-ಕಂದಹಾರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಯಾಣಿಕ ಬಸ್ ಹೆರಾತ್ ನಗರದಿಂದ ರಾಜಧಾನಿ ಕಾಬೂಲ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ನಂತರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಅಪಘಾತದಲ್ಲಿ 16 ಬಸ್ ಪ್ರಯಾಣಿಕರು, ಟ್ಯಾಂಕರ್ ನಲ್ಲಿದ್ದ ಮೂವರು ಹಾಗೂ ಇಬ್ಬರು ಬೈಕ್ ಸವಾರರು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದು, 11 ಮಂದಿಯ ಸ್ಥಿತಿ ಗಂಭೀರವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


