ರಾಷ್ಟ್ರಧ್ವಜ ಹಾರಿಸದೇ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಮಧುಗಿರಿ ಪುರಸಭೆಯ ಅಧಿಕಾರಿಗಳ ಮೇಲೆ ಕಾನೂನೂ ರೀತಿಯ ಕ್ರಮ ಜರುಗಿಸುವಂತೆ ಇಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಬಿ. ಕರಾಳೆ ಅವರಿಗೆ ಕಾಳಜಿ ಫೌಂಡೇಶನ್ ತುಮಕೂರು ಮತ್ತು ಕರ್ನಾಟಕ ರಣಧೀರರ ವೇದಿಕೆ ಕಾರ್ಯಕರ್ತರು ದೂರು ನೀಡಿದರು.
ದಿನಾಂಕ :16/03/2024 ರ ಶನಿವಾರದಂದು ಮಧುಗಿರಿಯ ಪುರಸಭೆ ಕಾರ್ಯಾಲಯದ ಧ್ವಜಸ್ತಂಭ ರಾಷ್ಟ್ರಧ್ವಜ ಹಾರಿಸದೇ ಅಪಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು.
ಪುರಸಭೆ ಮ್ಯಾನೇಜರ್ ಗುರುಪ್ರಸಾದ್ ರಾಷ್ಟ್ರಧ್ವಜ ಹಾರಿಸಲು ನಮಗೆ ಯಾವುದೇ ಆದೇಶವಿಲ್ಲ ಹಾಗಾಗಿ ನಾನು ಧ್ವಜ ಹರಿಸಿಲ್ಲ ಎಂದು ಸಬೂಬು ಹೇಳಿದ್ದರು. ಈ ಸಂಬಂಧ ಹೋರಾಟಗಾರರು ಸರ್ಕಾರದ ಆದೇಶ ಪತ್ರ ಲಗತ್ತಿಸಿ ಅಪರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಪಡಿಸಬೇಕೆಂದು ಹೋರಾಟಗಾರರು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296