nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
    ರಾಜ್ಯ ಸುದ್ದಿ March 20, 2024

    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

    By adminMarch 20, 2024No Comments2 Mins Read
    praveen nettaru

    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ನಿವಾಸಿ 35 ವರ್ಷದ ಜಾಬೀರ್, ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.


    Provided by
    Provided by

    ಅರ್ಜಿದಾರರ ಪರ ವಕೀಲರು, ವಿಚಾರಣಾ ನ್ಯಾಯಾಲಯದಲ್ಲಿ (ವಿಶೇಷ ನ್ಯಾಯಾಲಯ) ಎನ್‌ಐಎ ಪರವಾಗಿ ಹಾಜರಾಗಿ ಅರ್ಜಿದಾರರ ಕಸ್ಟಡಿ ಆದೇಶ ವಿಸ್ತರಿಸುವಂತೆ ಕೋರಿರುವವರು ವಿಶೇಷ ಸರ್ಕಾರಿ ಅಭಿಯೋಜಕರಲ್ಲ. ಅಲ್ಲದೇ, ಅವರ ಮೌಖಿಕ ಕೋರಿಕೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಪರಿಗಣಸಿದೆ ಎಂದು ತಿಳಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರರ ಪರ ವಾದ, ಕೃತಕ ಮತ್ತು ತಾಂತ್ರಿಕವಾಗಿದೆ. ಅಮೀನ್ ಅವರ ವಾದ ಒಪ್ಪಿದರೆ ವಕೀಲರ ಜೂನಿಯರ್ ಅಥವಾ ಸಹೋದ್ಯೋಗಿ ಅವರ ಪರವಾಗಿ ಹಾಜರಾಗುವಂತಿಲ್ಲ ಎಂಬುದಾಗಲಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು.

    ಪ್ರಕರಣದ ವಿವರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜಾಬೀರ್ 21ನೇ ಆರೋಪಿಯಾಗಿದ್ದು, ಈತನ ವಿರುದ್ಧ ಐಪಿಸಿ ಸೆಕ್ಷನ್ 302, ಶಸ್ತ್ರಾಸ್ತ್ರ ಕಾಯಿದೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾಗಿದೆ.

    2022ರ ನವೆಂಬರ್ 7ರಂದು ಜಬೀರ್ ಬಂಧನವಾಗಿದ್ದು, 2023ರ ಜನವರಿ 20ರಂದು 20 ಆರೋಪಿಗಳ ವಿರುದ್ಧ ಎನ್ ‌ಐಎ ಆರೋಪ ಪಟ್ಟಿ ಸಲ್ಲಿಸಿ, ಹೆಚ್ಚುವರಿ ತನಿಖೆಗೆ ಮನವಿ ಮಾಡಿತ್ತು. ಆದರೆ, ಜಾಬೀರ್ ವಿರುದ್ಧ ಯಾವುದೇ ಆರೋಪಪಟ್ಟಿ ಸಲ್ಲಿಸಿರಲಿಲ್ಲ. 2023ರ ಫೆಬ್ರವರಿ 6 ರಂದು ಜಾಬೀರ್ 90 ದಿನಗಳ ಬಂಧನ ಅವಧಿ ಮುಗಿದಿದ್ದರೂ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. 2023ರ ಫೆಬ್ರವರಿ 7ರಂದು ಪ್ರಕರಣದ ವಿಚಾರಣೆಯ ದಿನ ಜಾಬೀರ್ ಜಾಮೀನು ಕೋರಿರಲಿಲ್ಲ. ಎನ್‌ಐಎ ಕಸ್ಟಡಿ ವಿಸ್ತರಣೆಯನ್ನೂ ಕೋರಿರಲಿಲ್ಲ. 2023ರ ಫೆಬ್ರವರಿ 8ರಂದು ಎನ್‌ಐಎ ಕಸ್ಟಡಿ ವಿಸ್ತರಣೆ ಕೋರಿದ್ದು, ಅದೇ ದಿನ ಅರ್ಜಿದಾರರು ಡೀಫಾಲ್ಟ್ ಜಾಮೀನು ಕೋರಿದ್ದರು. ಇದನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಆ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.