ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವು ಆದಿಮಲಿ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 11 ಮಂದಿ ಗಾಯಗೊಂಡಿದ್ದು, ಜೊತೆಗೆ 1 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
14ಜನ ವಾಹನದಲ್ಲಿ ಇದ್ದಿದ್ದು, ಅವರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಈ ಅಪಘಾತವು ಮಂಗಳವಾರ ಸಂಜೆ ಆರು ಗಂಟೆಯ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೇಗೆ ಸಂಭವಿಸಿತು ಎಂಬ ವಿವರ ಇನ್ನಷ್ಟೇ ತಿಳಿಯಬೇಕಿದೆ.
ಗಾಡಿಯಲ್ಲಿ ಪ್ರವಾಸಿಗರಿದ್ದು, ತಮಿಳುನಾಡಿನ ಥೇಣಿಯಿಂದ ಬಂದಿದ್ದು, ಇಲ್ಲಿನ ಮಂಕುಲಂಗೆ ಭೇಟಿ ನೀಡಿ ವಾಪಾಸ್ಸಾಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


