ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ. ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು.
ನಿನ್ನೆ (ಮಾ.19) ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳಕ್ಕೆ ಎಫ್ ಎಸ್ ಎಲ್ ಸಿಬ್ಬಂದಿ ಮತ್ತು ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


