ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಬೆಂಕಿ ಆರಿಸಲು ಹೋದ ರೈತ ಬೆಂಕಿಗಾಹುತಿಯಾದ ದುರಂತ ಘಟನೆ ನಡೆದಿದೆ. ಕೃಷ್ಣೇಗೌಡ (62) ಮೃತರೈತನಾಗಿದ್ದಾನೆ.
ಕೃಷ್ಣೇಗೌಡ ತಮ್ಮ ಜಮೀನಿಗೆ ತೆರಳಿದ್ದ ವೇಳೆ, ಜಮೀನಿನ ಬದುವಿನಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ತಗುಲಿದ್ದನ್ನು ಕಂಡಿದ್ದಾರೆ. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಭೀತಿಗೊಂಡ ಕೃಷ್ಣೇಗೌಡರು ಬೆಂಕಿ ಆರಿಸಲು ಹೋಗಿದ್ದು, ಧಗಧಗಿಸಿ ಉರಿಯುತ್ತಿದ್ದ ಬೆಂಕಿಗೆ ಸಿಲುಕಿ ಕೃಷ್ಣೇಗೌಡರು ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದರು.
ಕೂಡಲೇ ಗಾಯಗೊಂಡ ರೈತನನ್ನು ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೃಷ್ಣೇಗೌಡರು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


