ಮೈಸೂರು: ಮೈಸೂರಿನ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಯಾಗಿದ್ದ ಎಚ್.ಸಿ. ಹರೀಶ್ (40) ಎಂಬುವರ ಮೃತದೇಹ ಪತ್ತೆಯಾಗಿದೆ.
ಸಾಲಿಗ್ರಾಮ ತಾಲೂಕಿನ ಕುಪ್ಪೆ ಅರಣ್ಯದ ಮಳಲಿ- ಹೊಸಕೋಟೆ ರಸ್ತೆಯ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ನೇಹಿತರು ಬಂದು ಕರೆದುಕೊಂಡು ಹೋಗಿ ಇವರನ್ನು ಕೊಲೆ ಮಾಡಿದ್ದಾರೆ ಎಂಬ ಸಂಶಯ ಕೇಳಿಬರುತ್ತಿದೆ.
ಮಾಹಿತಿ ತಿಳಿದ ಸಾಲಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕೊಲೆಯ ಹಿಂದಿನ ವಿದ್ಯಮಾನಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


