nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಯ ಗುಂಪು ಹತ್ಯೆ: 20 ವಿದ್ಯಾರ್ಥಿಗಳಿಗೆ ಮರಣದಂಡನೆ
    ಸ್ಪೆಷಲ್ ನ್ಯೂಸ್ December 10, 2021

    ವಿದ್ಯಾರ್ಥಿಯ ಗುಂಪು ಹತ್ಯೆ: 20 ವಿದ್ಯಾರ್ಥಿಗಳಿಗೆ ಮರಣದಂಡನೆ

    By adminDecember 10, 2021No Comments2 Mins Read
    bangladesh

    ಬಾಂಗ್ಲಾದೇಶ: ಸರ್ಕಾರವನ್ನ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನ ಸಹ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು.. ಈ ಘಟನೆಗೆ ಸಂಬಂಧಿಸಿದಂತೆ 20 ವಿದ್ಯಾರ್ಥಿಗಳಿಗೆ ಬಾಂಗ್ಲಾದೇಶದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.. ಸರ್ಕಾರವನ್ನು ಟೀಕಿಸಿ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಆವರಣದಲ್ಲೇ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.. ಹೀಗಾಗಿ ಪ್ರಕರಣದಲ್ಲಿ 20 ವಿದ್ಯಾರ್ಥಿಗಳಿಗೆ ಢಾಕಾ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ.

    ಈ ಮೂಲಕ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿರುವುದಾಗಿ ಕೋರ್ಟ್‌ ಹೇಳಿದೆ. ಆರೋಪಿಗಳೆಲ್ಲರೂ ದೋಷಿಗಳೆಂದು ಸಾಬೀತಾಗಿದ್ದು, 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಮೂರ್ತಿ ಅಬು ಜಾಫರ್‌ ಮೊಹಮ್ಮದ್‌ ಕಮ್ರುಜ್ಜಾಮನ್‌ ಘೋಷಿಸಿದ್ದಾರೆ. ಒಟ್ಟು 25 ತಪ್ಪಿತಸ್ಥರ ಪೈಕಿ ಮೂವರು ಕೃತ್ಯ ನಡೆದ ದಿನದಿಂದಲೂ   ತಲೆಮರೆಸಿಕೊಂಡಿದ್ದು, ಉಳಿದ ಎಲ್ಲರೂ ಜೈಲಿನಲ್ಲಿದ್ದಾರೆ.


    Provided by
    Provided by

    2019ರ ಅಕ್ಟೋಬರ್‌ 6ರಂದು ಬಾಂಗ್ಲಾದೇಶದ ಇಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿ ಅಬ್ರಾರ್‌ ಫಹಾದ್‌ ಎಂಬುವವರನ್ನು ಕಾಲೇಜಿನ ಆವರಣದಲ್ಲಿ ಉದ್ರಿಕ್ತ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಶಿಕ್ಷೆಗೊಳಗಾಗಿರುವ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌ ಮತ್ತಿತರ ವಸ್ತುಗಳಿಂದ ಸುಮಾರು 6 ಗಂಟೆಗಳ ಕಾಲ ಫಹಾದ್‌ ಮೇಲೆ ಹಲ್ಲೆ ನಡೆಸಿದ್ದರು. ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಬಾಂಗ್ಲಾದೇಶ್‌ ಛಾತ್ರ ಲೀಗ್‌ (ಬಿಸಿಎಲ್‌)ನ ಕಾರ್ಯಕರ್ತರು ಹಲ್ಲೆಯಲ್ಲಿ ಭಾಗಿಯಾಗಿದ್ದರು.

    21 ವರ್ಷದ ವಿದ್ಯಾರ್ಥಿಯ ಹತ್ಯೆಗೆ ಸಂಬಂಧಿಸಿ ಬಾಂಗ್ಲಾದೇಶದೆಲ್ಲೆಡೆ ಪ್ರತಿಭಟನೆ ನಡೆದಿತ್ತು. ಕೃತ್ಯದ ಸಿಸಿಟಿವಿ ಫೂಟೇಜ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಘಟನೆ ನಡೆದ ಬಳಿಕ ಬಿಸಿಎಲ್‌ ವಿದ್ಯಾರ್ಥಿ ಸಂಘಟನೆಯಿಂದ ಎಲ್ಲ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರೇ ಆರೋಪಿಗಳನ್ನು ಸಂಘಟನೆಯಿಂದ ಹೊರಹಾಕುವಂತೆ ಸೂಚಿಸಿದ್ದರು. ಕಾಲೇಜಿನಿಂದಲೂ ಅವರನ್ನು ಹೊರ ಹಾಕಲಾಗಿತ್ತು. ಭಾರತ ಮತ್ತು ಬಾಂಗ್ಲಾ ನಡುವಣ ನದಿ ನೀರು ಹಂಚಿಕೆ ವಿಚಾರವಾಗಿ ಆಡಳಿತರೂಢ ಅವಾಮಿ ಲೀಗ್‌ ಸರ್ಕಾರವನ್ನು ಫಹಾದ್‌ ಫೇಸ್‌ ಬುಕ್‌ನಲ್ಲಿ ಟೀಕಿಸಿದ್ದಕ್ಕೆ ವಿದ್ಯಾರ್ತಿಗಳ ಗುಂಪು ಉದ್ವೇಗಕ್ಕೆ ಒಳಗಾಗಿ ವಿದ್ಯಾರ್ಥಿಯನ್ನ ಕೊಲೆ ಮಾಡಿದ್ದರು ಎನ್ನಲಾಗಿದೆ.

    ವರದಿ : ಆಂಟೋನಿ ಬೇಗೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.