ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರು ಕ್ರಾಸ್ ಬಳಿ ಸಾರಿಗೆ ಬಸ್ ಏಕಾಏಕಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಮಾರು 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಜೇಂದ್ರಗಡದಿಂದ ಗದಗ ಕಡೆಗೆ ಬಸ್ ಹೊರಟಿತ್ತು. ಇದೇ ವೇಳೆ ಗದಗನಿಂದ ಬರುತ್ತಿದ್ದ ಮತ್ತೊಂದು ಬಸ್ ಗೆ ದಾರಿ ಬಿಡುವಾಗ ಆಯತಪ್ಪಿ ಕಂದಕಕ್ಕೆ ಬಿದ್ದಿದೆ.
ಬಸ್ ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


