ಚಾಮರಾಜನಗರದ ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದಲ್ಲಿ ಆನೆ ದಾಳಿಯಿಂದ ಯುವಕನೊಬ್ಬ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಮಾದ(23) ಮೃತ ದುರ್ದೈವಿಯಾಗಿದ್ದಾನೆ.
ಹಿರಿಯಂಬಲ ಗ್ರಾಮಕ್ಕೆ ಹೋಗಿ ವಾಪಸಾಗುತ್ತಿದ್ದ ಮಾದನ ಮೇಲೆ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಆನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


