ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಟ್ಟನಹಳ್ಳಿಯಲ್ಲಿ ಪತಿಯೊಬ್ಬ ಮದ್ಯ ಸೇವಿಸಲು ಹಣ ಕೊಟ್ಟಿಲ್ಲವೆಂಬ ಕಾರಣಕ್ಕೆ, ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಪತ್ನಿ ಹಾಗೂ ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಪತಿ ಬೆಂಕಿ ಹಚ್ಚುತ್ತಿದ್ದಂತಯೇ ಪತ್ನಿ ಹಾಗೂ ಮಕ್ಕಳು ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯಲ್ಲಿ ಪತ್ನಿ ಆಶಾಗೆ ಗಾಯವಾಗಿದ್ದು ಸೋಲದೇವನಹಳ್ಳಿಯ ಲೀಲಾವತಿ ಆಸ್ಪತ್ರೆಯಲ್ಲಿ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಕಿಯಿಂದ ಮಕ್ಕಳ ಶಾಲಾ ಪುಸ್ತಕ, ಟಿವಿ, ಬಟ್ಟೆ ಸೇರಿ ಗೃಹ ಉಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಪತ್ನಿ ನೀಡಿದ ದೂರಿನ ಮೇರೆಗೆ ಇದೀಗ ಕಿರಣ್ ಕುಮಾರ್(31)ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


