ಶಿವಮೊಗ್ಗ: “ಕಾಂಗ್ರೆಸ್ ಪಕ್ಷದಲ್ಲಿನ ಕುಟುಂಬ ರಾಜಕಾರಣ ಸಂಸ್ಕೃತಿ ರಾಜ್ಯ ಬಿಜೆಪಿಗೂ ತಟ್ಟಿದೆ” ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಡೆದ ಗ್ರಾಮೀಣ ಭಾಗದ ಕಾರ್ಯಕರ್ತರ ಸಮಾವೇಶದಲ್ಲಿ ಹೇಳಿದರು.
ಕಳೆದ ವಿಧಾನ ಸಭಾ ಚುನಾವಣೆ ವೇಳೆ ತಾವೇಕೆ ಬಂಡಾಯ ಏಳಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೋದಿ ಅವರು ಒಂದು ಕುಟುಂಬದ ಹಿಡಿತದಲ್ಲಿ ಪಕ್ಷ ಇರಬಾರದು ಎನ್ನುತ್ತಿದ್ದರು. ಹೀಗಾಗಿ ವರಿಷ್ಠರು ಚುನಾವಣೆ ಸ್ಪರ್ಧಿಸುವುದು ಬೇಡ ಎಂದಾಗ ಒಪ್ಪಿಕೊಂಡಿದ್ದೆ. ಆದರೆ ಈಗ ಯಡಿಯೂರಪ್ಪ ಕುಟುಂಬ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಆಳುತ್ತಿದೆ ಎಂದು ಆರೋಪಿಸಿದರು.
ಒಂದು ಕುಟುಂಬದಲ್ಲಿ ಪಕ್ಷದ ಅಧಿಕಾರ ಇರಬಾರದು ಎನ್ನುವ ಸಿದ್ದಾಂತ ಈಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿರುವ ಅವರು, ಕುಟುಂಬ ರಾಜಕಾರಣದ ವಿರುದ್ಧ ಹೋರಾಡಬೇಕು ಎಂಬ ಕಾರಣಕ್ಕೆ ಈಗ ಚುನಾವಣೆಗೆ ಸ್ಪರ್ಧಿಸಬೇಕಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


