ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಅರವಿಂದ ಕೇಜ್ರಿವಾಲ್ ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಇಡಿ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬಲವಂತದ ಕ್ರಮ ತೆಗೆದುಕೊಳ್ಳದಂತೆ ಇಡಿಗೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿ ವಜಾ ಹಿನ್ನೆಲೆ ಕೇಜ್ರಿವಾಲ್ ನಿವಾಸಕ್ಕೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು.
ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


