ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿರುವ ಸಾನ್ಯಾ ಅಯ್ಯರ್ ತಮ್ಮ ಚೊಚ್ಚಲ ಸಿನಿಮಾ ‘ಗೌರಿ’ಯ ಶೂಟಿಂಗ್ ಮುಗಿಸಿದ್ದಾರೆ. ಡಬ್ಬಿಂಗ್ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿ ಕೊಂಡಿದ್ದು, ಇದೀಗ ಡಬ್ಬಿಂಗ್ ಕೆಲಸ ಕಾರ್ಯಗಳು ಮುಗಿದಿವೆ. ಇದೀಗ ಸಮ್ಮರ್ ಹಾಲಿಡೇ ಕಳೆಯಲ್ಲಿ ತಾಯಿ ಜೊತೆ ಕೂರ್ಗಿಗೆ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲಿ ಫೋಟೋಗೆ ಸಖತ್ ಪೋಸ್ ಕೂಡ ಕೊಟ್ಟಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿವೆ.
‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್, ಈ ಚಿತ್ರಕ್ಕಾಗಿ ಮತ್ತೊಂದು ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದರು. ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಗೌರಿ ಚಿತ್ರಕ್ಕಾಗಿ ಹೊಸ ಲುಕ್ ನಲ್ಲಿ ಸ್ಟೈಲಿಶ್ ಗೆಟಪ್ ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದರು. ಸದ್ಯ ಈ ಚಿತ್ರದ ಶೂಟಿಂಗ್ ಚಿಕ್ಕಮಗಳೂರು ಸೇರಿದಂತೆ ನಾನಾ ಸ್ಥಳಗಳಲ್ಲಿ ಶೂಟ್ ಆಗಿದೆ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


