ತುಮಕೂರು: ಮಾಜಿ ಸಚಿವ ಮಾಧುಸ್ವಾಮಿ ಪಕ್ಷ ಬಿಡುವುದಿಲ್ಲ, ನಮ್ಮ ಜೊತೆಯಲ್ಲೇ ಇರ್ತಾರೆ. ಅಲ್ಲದೆ ಈ ಬಗ್ಗೆ ನನಗೆ ಭರವಸೆ ಕೂಡ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಮಾಜಿ ಶಾಸಕ ಮಸಾಲೆ ಜಯರಾಮ್ ಮನೆಯಲ್ಲಿ ಇಂದು, ಮಾಧುಸ್ವಾಮಿ ಜೊತೆ ಸುದೀರ್ಘ ಮಾತುಕತೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಮಾಧುಸ್ವಾಮಿ ಪಕ್ಷದಲ್ಲಿ ಇದ್ದರೆ ದೊಡ್ಡ ಶಕ್ತಿ ಇದ್ದಂತೆ ನಮಗೆ. ಪಕ್ಷ ಬಿಡೊಲ್ಲ ಅಂತ ಒಪ್ಪಿಕೊಂಡಿದ್ದಾರೆ. ನಾವು ಚುನಾವಣೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಇನ್ನು ಇದೇ ಸಂದರ್ಭದಲ್ಲಿ ಹಾಜರಿದ್ದ ಮಾಧುಸ್ವಾಮಿ ಮಾತನಾಡಿ, ನಾನು ಕಾಂಗ್ರೆಸ್ ಸೇರಲು ಮುಂದಾಗಿದ್ದು ನಿಜ. ಯಾರು ಯಾರು ಸಂಪರ್ಕ ಮಾಡಿದ್ರು ಎಂದು ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ಸದ್ಯ ಬಿಜೆಪಿಯಲ್ಲಿಯೇ ಉಳಿಯುವುದಾಗಿ ಹೇಳಿದರು.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರಿಗೆ ಬೆಂಬಲ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸೋಮಣ್ಣ ಅವರಿಗೆ ಸಪೋರ್ಟ್ ಮಾಡುವ ಬಗ್ಗೆ ಯೋಚನೆ ಮಾಡುತ್ತೇನೆ ಎಂದು ಹೇಳಿದರು.
ಸ್ವತಃ ಸೋಮಣ್ಣ ಅವ್ರೆ ನನ್ನ ಹೆಂಡತಿ ಕೂಡ ನನ್ನ ಮಾತು ಕೇಳೋಲ್ಲ ಎಂದು ಅವರೇ ಹೇಳಿದ್ದಾರಲ್ಲ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


