ಹುಬ್ಬಳ್ಳಿ: ಪಕ್ಷ ಕಟ್ಟಿದವರನ್ನು ಎಂದಿಗೂ ಬಿಟ್ಟುಕೊಡಲು ಸಾಧ್ಯವಿಲ್ಲ. ಬಿಜೆಪಿಯಿಂದ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಮನವೊಲಿಸುವ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂಬ ಬಯಕೆ ಈಶ್ವರಪ್ಪ ಅವರಿಗಿದೆ. ಅವರ ಮನವೊಲಿಕೆಗೆ ನಮ್ಮ ನಾಯಕರು ಖಂಡಿತಾ ಯಶಸ್ವಿಯಾಗುತ್ತಾರೆ. ಚುನಾವಣೆ ಸಂದರ್ಭ ಅಸಮಾಧಾನ ಸಹಜ. ಸಂಗಣ್ಣ ಕರಡಿ, ಪ್ರತಾಪ್ ಸಿಂಹ, ಸದಾನಂದ ಗೌಡ ಅವರೆಲ್ಲರೊಂದಿಗೂ ಮಾತನಾಡಲಾಗುತ್ತಿದೆ. ಇವರೆಲ್ಲರೂ ಪಕ್ಷ ಕಟ್ಟಿದವರು ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು.
ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ನಾಟಕದ ಒಂದು ಭಾಗ. ಅವರು ಮತಗಳಿಗಾಗಿ ದೊಡ್ಡ ಮಟ್ಟದಲ್ಲಿ ಪಾದಯಾತ್ರೆ ಮಾಡಿದ್ದರು. ಕಾಂಗ್ರೆಸ್‌ಗೆ ನಿಜವಾಗಿಯೂ ಕಾಳಜಿ ಇದ್ದರೆ ಇಂಡಿಯಾ ಕೂಟದಿಂದ ಹೊರಬರಬೇಕು. ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


