ಚಂಡೀಗಢ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದರೆ, ಅಲ್ಲಿಂದಲೇ ಸರ್ಕಾರ ನಡೆಸಲು ಜೈಲಿನಲ್ಲಿ ಕಚೇರಿ ಸ್ಥಾಪಿಸಲು ಅನುಮತಿ ಕೋರಿ ನ್ಯಾಯಾಲಯವನ್ನು ಸಂಪರ್ಕಿಸುತ್ತೇವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೇಳಿದ್ದಾರೆ.
ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ ಎಂದು ಪಂಜಾಬ್ ಸಿಎಂ ಪ್ರತಿಪಾದಿಸಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವ ಬಗ್ಗೆ ಮತ್ತು ಅವರು ಹೇಗೆ ಸರ್ಕಾರ ನಡೆಸುತ್ತಾರೆ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮಾನ್, ಸರ್ಕಾರವನ್ನು ಜೈಲಿನಿಂದ ನಡೆಸಲು ಸಾಧ್ಯವಿಲ್ಲ ಎಂದು ಎಲ್ಲಿಯೂ ಬರೆಯಲಾಗಿಲ್ಲ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


