nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ:  ಇಂದಿನಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಆರಂಭ
    ಪಾವಗಡ March 24, 2024

    ಪಾವಗಡ:  ಇಂದಿನಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಆರಂಭ

    By adminMarch 24, 2024No Comments2 Mins Read
    pavagada

    ಪಾವಗಡ:  ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಶ್ರೀಕ್ಷೇತ್ರ ವದನಕಲ್ಲು ಗ್ರಾಮದಲ್ಲಿ ನೆಲೆ ನಿಂತಿರುವ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 24ರಿಂದ 31 ರವರೆಗೆ 8 ದಿನಗಳ ಕಾಲ ನೆರವೇರಲಿದೆ.

    ವದನಕಲ್ಲು ಕ್ಷೇತ್ರವು ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪವಾಡಗೈದ  ರಾಜ್ಯದ 7 ಕ್ಷೇತ್ರಗಳಲ್ಲಿ ಒಂದಾಗಿದ್ದು, ಗದ್ದುಗೆಯನ್ನು ಹೊಂದಿರುವ ಸ್ಥಳವಾಗಿದೆ. ನಾಯಕನಹಟ್ಟಿ ಸೇರಿದಂತೆ ರಾಜ್ಯದಾಧ್ಯಂತ ಏಕಕಾಲಕ್ಕೆ 7 ಸ್ಥಳಗಳಲ್ಲಿ ಶ್ರೀಗುರುಗಳ ಜಾತ್ರೆ ಮತ್ತು ರಥೋತ್ಸವ ನೆರವೇರುವುದು ವಿಶೇಷವಾಗಿದೆ. ಅವುಗಳಲ್ಲಿ ವದನಕಲ್ಲು ಒಂದಾಗಿದ್ದು, ಇಲ್ಲಿ ಸುಮಾರು 8 ದಶಕಗಳಿಂದ ಪ್ರತಿ ವರ್ಷ ಜಾತ್ರಾ ಮಹೋತ್ಸವ ನೆರವೇರುತ್ತಾ ಬಂದಿದೆ. ಇಲ್ಲಿನ ರಥೋತ್ಸವದ ಅಂಗವಾಗಿ ದನಗಳ ಜಾತ್ರೆಯೂ ಹಲವು ದಿನಗಳು ಕಾಲ ನಡೆಯುತ್ತಾ ರೈತಾಪಿ ವರ್ಗಕ್ಕೆ ಅನುಕೂಲಕರವಾಗಿದೆ.


    Provided by
    Provided by

    ಈ ವರ್ಷದ ಜಾತ್ರೆಯ ಭಾಗವಾಗಿ ಮಾರ್ಚ್ 24 ರ ಭಾನುವಾರ ಗಂಗಾಪೂಜೆ, ನಂಧಿದ್ವಜಪೂಜೆ ಧ್ವಜಾರೋಹಣ, ಸೋಮವಾರ ರುದ್ರಾಭಿಷೇಕ ಮತ್ತು ಸಹಸ್ರಬಿಲ್ವಾರ್ಚನೆ, ಮಂಗಳವಾರದ ಚಿತ್ತಾ ನಕ್ಷತ್ರದಲ್ಲಿ ಬ್ರಹ್ಮ ರಥೋತ್ಸವ ಮತ್ತು ಸಂಜೆ ಶ್ರೀ ವೀರ ಬ್ರಹ್ಮೇಂದ್ರಸ್ವಾಮಿ ಚರಿತ್ರೆ ಎಂಬ ನಾಟಕ ಪ್ರದರ್ಶನ, ಬುಧವಾರ ಕಳಶಾರಾಧನೆ, ಎಲೆಪೂಜೆ, ಗುರುವಾರ ಕೊಬ್ಬರಿ ಕರ್ಪೂರ ಅಗ್ನಿಗೊಂಡ ಸಂಜೆ ಸುಗಮ ಸಂಗೀತ, ಶುಕ್ರವಾರ ಹೂವಿನ ರಥೋತ್ಸವ, ಶನಿವಾರ ಎಲೆಪೂಜೆ ಉತ್ಸವ, ಭಾನುವಾರ ವಸಂತೋತ್ಸವ ಹಾಗೂ ಗುಗ್ಗರಿ ಬಂಡಿ ಉತ್ಸವಗಳು ನೆರವೇರಲಿವೆ ಎಂದು ದೇವಾಲಯ ಕಾರ್ಯನಿರ್ವಾಕ ಸಮಿತಿ ತಿಳಿಸಿದೆ.

    ಚಿತ್ತಾ ನಕ್ಷತ್ರದಲ್ಲಿ ವಿಜೃಂಭಣೆಯಿಂದ ನೆರವೇರುವ ಪ್ರಸಿದ್ಧ ರಥೋತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ. ಇತ್ತೀಚೆಗೆ ಆಡಳಿತ ಸಮಿತಿಯು ಭಕ್ತಾಧಿಗಳ ಸಹಕಾರದಿಂದ ದೇವಾಲಯ ಜೀರ್ಣೋದ್ದಾರ ಕೈಗೊಂಡಿದ್ದು, ದೇವಾಲಯ ಸುಂದರವಾಗಿ ರೂಪುಗೊಳ್ಳುತ್ತಿದೆ.

    ಪ್ರತಿ ಸೋಮವಾರ ಮತ್ತು ಜಾತ್ರೆಯ ಸಮಯದಲ್ಲಿ ಪ್ರತಿನಿತ್ಯ ಅನ್ನದಾಸೋಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿವಾಹ ಮಾಡಿಕೊಳ್ಳುವ ಬಡ ಜನತೆಗೆ ಅನುಕೂಲವಾಗಲೆಂದು ಕೇವಲ ಶುಭ್ರತೆಯ ವೆಚ್ಚವನ್ನು ಮಾತ್ರ ಪಡೆಯುತ್ತಾ ವಿವಾಹಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಈ ಕ್ಷೇತ್ರದಲ್ಲಿ ಮಾಡಲಾಗಿದೆ. ಆದಾಗಿ ಈ ಕ್ಷೇತ್ರವು ಸರಳ ವಿವಾಹಗಳ ವೇದಿಕೆಯಾಗಿ ಮಾರ್ಪಟ್ಟಿದ್ದು, ವರ್ಷಪೂರ್ತಿ ವಿವಾಹಗಳು ನೆರವೇರುತ್ತಲೇ ಇರುತ್ತವೆ.

    ಇದರಂತೆ ಹೋಬಳಿ ಮಾರಮ್ಮನಹಳ್ಳಿ ಕ್ಷೇತ್ರದಲ್ಲಿ ಇದೇ ಚಿತ್ತಾ ನಕ್ಷತ್ರದಲ್ಲಿ ಕಾಯಕಯೋಗಿ ಗುರು ತಿಪ್ಪೇರುದ್ರಸ್ವಾಮಿಯ ಬ್ರಹ್ಮ ರಥೋತ್ಸವ ನೆರವೇರಲಿದೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.