ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಶನಿವಾರ ರಾತ್ರಿ ಬಿಡುಗಡೆ ಮಾಡಿದೆ.
ಈ ಪಟ್ಟಿಯ ವಿಶೇಷ ಏನೆಂದರೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ಕಾಂಗ್ರೆಸ್ಸ್ ನಿಂದ ಟಿಕೆಟ್ ದೊರಕಿದೆ. ಕಳೆದ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಇದೀಗ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ಪಡೆದು ತಮ್ಮ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರ ಎದುರು ಎರಡು ಬಾರಿ ಸ್ಪರ್ಧಿಸಿ ಅವರು ಸೋಲು ಅನುಭವಿಸಿದ್ದರು.
ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಪಿ ಚಿದಂಬರಂ ಅವರಿಗೆ ತಮಿಳುನಾಡಿನ ಶಿವಗಂಗಾ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಆದರೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್ಬರೇಲಿಗೆ ಈ ಲಿಸ್ಟ್ನಲ್ಲಿ ಟಿಕೆಟ್ ಘೋಷಣೆ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಎರಡೂ ಕ್ಷೇತ್ರಗಳಿಗೆ ಇನ್ನೂ ಟಿಕೆಟ್ ಪ್ರಕಟ ಮಾಡಲಾಗಿಲ್ಲ.
ತಮಿಳುನಾಡು 7, ಮಹಾರಾಷ್ಟ್ರ 4, ಮಣಿಪುರ 2, ಪಶ್ಚಿಮ ಬಂಗಾಳದ 1 ಮಧ್ಯಪ್ರದೇಶ 12, ಚತ್ತೀಸ್ ಗಡ್ 1, ಜಮ್ಮು ಕಾಶ್ಮೀರ 2, ಅಸ್ಸಾಂ 1, ಅಂಡಮಾನ್ ನಿಕೋಬಾರ್ 1, ಮಿಜೋರಾಂ 1, ರಾಜಸ್ಥಾನ 3, ಉತ್ತರ ಪ್ರದೇಶ 9, ಉತ್ತರಾಖಂಡ 2, ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


