ಪಾವಗಡ: ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 25ರಂದು ಆರಂಭವಾಗಲಿದ್ದು, ಸಿದ್ಧತೆ ಪೂರ್ಣಗೊಂಡಿದೆ.
ಹೋಬಳಿಯಲ್ಲಿ ಒಟ್ಟು 33 ಪ್ರೌಢ ಶಾಲೆಗಳಿದ್ದು, 1252 ಜನ 10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 5 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದ ವಾಸವಿ ವಿದ್ಯಾನಿಕೇತನ, ದೊಡ್ಡಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಲಿಂಗದಹಳ್ಳಿ ದಿ ನ್ಯೂ ಎಂಪ್ರೆಸ್ ಪ್ರೌಢಶಾಲೆ ಹಾಗೂ ಕೋಟಗುಡ್ಡದ ಕರ್ನಾಟಕ ಪಬ್ಲಿಕ್ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದು, ದೊಡ್ಡಹಳ್ಳಿಯ ಸರ್ಕಾರಿ ಪ್ರೌಢಶಾಲ ಕೇಂದ್ರವನ್ನು ಸೂಕ್ಷ್ಮ ಪರೀಕ್ಷ ಕೇಂದ್ರ ಎಂದು ಗುರುತಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಸಿಸಿ ಟಿ.ವಿ ಅಳವಳಿಸಲಾಗಿದ್ದು, ಯಾವುದೇ ರೀತಿಯಲ್ಲಿ ನಕಲು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನೋಡಲ್ ಅಧಿಕಾರಿ ಶಿವಮೂರ್ತಿ ನಾಯ್ಕ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296