ಬೆಂಗಳೂರು: ಮಾರ್ಚ್ 31 ರೊಳಗಳೇ ಎಲ್ಲ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ.
ಇದೀಗ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಏಪ್ರಿಲ್ 1 ರಿಂದ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು:
•ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು.
- ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು
- ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.
- ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು:
*ಮತದಾರರ ಗುರುತಿನ ಚೀಟಿ
*ಆಧಾರ್ ಕಾರ್ಡ್
*ವಯಸ್ಸಿನ ಪ್ರಮಾಣಪತ್ರ
*ಚಾಲನಾ ಪರವಾನಿಗೆ
*ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
*ಮೊಬೈಲ್ ನಂ
*ಸ್ವಯಂ ಘೋಷಿತ ಪ್ರಮಾಣಪತ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


