ಮಂಡ್ಯ: ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ತಮಿಳುನಾಡು ಮೂಲದ ರಮೇಶ್ (67) ಮೃತ ವ್ಯಕ್ತಿಯಾಗಿದ್ದಾರೆ.
ಪಟಾಕಿಗಳ ತುಂಬುವಾಗ ಸ್ಫೋಟ ಸಂಭವಿಸಿದ್ದು, ಸ್ಫೋಟದಿಂದಾಗಿ ರಮೇಶ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗಲಿಂಗ ಹಾಗೂ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೇ ರೀತಿ ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಆಲೆಮನೆ ಹೊತ್ತಿ ಉರಿದಿದೆ. ಘಟನೆ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


