ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲಮನ್ನಾ ಮಾಡುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ತಿಳಿಸಿದ ಗೃಹ ಸಚಿವ ಪರಮೇಶ್ವರ್, ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲಮನ್ನಾ, ರೈತರ ರಕ್ಷಣೆ ಖಾಯ್ದೆ ಹೊಸ ಕಾನೂನು ರಚನೆ ಮತ್ತು ಕೃಷಿ ಕ್ಷೇತ್ರಕ್ಕೆ ಜಿಎಸ್‌ಟಿ ಹಾಕಲ್ಲ ಎಂದು ತಿಳಿಸಿದ್ದಾರೆ.
ಯುವಕರಿಗೆ ಕೌಶಲ್ಯ ಅಭಿವೃದ್ಧಿ ಟ್ರೈನಿಂಗ್ ಜೊತೆಗೆ 1 ಲಕ್ಷ ರೂ. ಬೆಂಬಲ. ಮಹಾಲಕ್ಷ್ಮಿ ಯೋಜನೆ ಅಡಿ ಮಹಿಳೆಯರಿಗೆ 1 ಲಕ್ಷ ರೂ. ಖಾತೆಗೆ ಹಾಕಲಾಗುತ್ತದೆ. ಜೊತೆಗೆ ಮೇಕೆದಾಟು ಯೋಜನೆಯನ್ನು ಕಾರ್ಯಗತ ಮಾಡೇ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


