ಬೆಂಗಳೂರು: ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಸುರೇಂದ್ರ ಮೂರ್ತಿ ಎಂಬುವವರು ವಿಶೇಷ ಚೇತನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ.
ಸುರೇಂದ್ರ ಮೂರ್ತಿ ಹಾಗೂ ವಿಶೇಷ ಚೇತನ ಯುವತಿಗೆ ಮೊದಲು ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರಲ್ಲಿ ಸಲುಗೆ, ನಂಬಿಕೆ ಹೆಚ್ಚಾದ ಬಳಿಕ, ಸುರೇಂದ್ರ ಮೂರ್ತಿ ತನ್ನೊಂದು ಬ್ಯುಸಿನೆಸ್ ಮಾಡುವ ಸಲುವಾಗಿ ಹಣ ಬೇಕೆಂದು ಯುವತಿ ಬಳಿ ಕೇಳಿದ್ದ. ಇದನ್ನು ನಂಬಿದ ಯುವತಿಯು, ತನ್ನ ಪ್ರಿಯತಮನಿಗಾಗಿ ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು, ಸಾಲ ಮಾಡಿ ಪ್ರಿಯತಮನಿಗೆ ಹಣ ನೀಡಿದ್ದರು.
ಆದರೆ ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚನೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ ಪ್ರೀತಿಯಲ್ಲಿದ್ದ ವೇಳೆ ಲೈಂಗಿಕವಾಗಿಯೂ ಬಳಸಿಕೊಂಡಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ.
ಸದ್ಯ ವಿಶೇಷ ಚೇತನ ಯುವತಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


