ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಹಿಳೆಯೊಬ್ಬರು ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮಹಿಳೆಯು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಆತ್ಮಹತ್ಯೆಗೂ ಮುನ್ನ ಮಹಿಳೆ ತನ್ನ ಸಹೋದರಿನಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಳು. “ತಾನು ಗಂಡು ಮಗು ಹೆತ್ತಿಲ್ಲ ಎನ್ನುವ ಕಾರಣಕ್ಕೆ ಅತ್ತೆಯ ಮನೆಯಲ್ಲಿ ಎಲ್ಲರೂ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಳು.
ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ಸ್ಥಳದಲ್ಲಿ ಪತ್ರವೊಂದು ಸಿಕ್ಕಿದ್ದು ಅದರ ತನಿಖೆ ಮಾಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


