ಚಿಕ್ಕಬಳ್ಳಾಫುರ: ಐದು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿಲಮತ್ತೂರು ಬಳಿಯ ಮರ್ಕತ್ ಪಲ್ಲಿಯಲ್ಲಿ ನಡೆದಿದೆ. ತಾಯಿ ಅನಿತಾ, ಮಕ್ಕಳಾದ ಲಾವಣ್ಯ (11), ಧರಣಿ(9), ಕಾವ್ಯ(8), ರಕ್ಷಿತಾ(5), ಶ್ರೀವಲ್ಲಿ(2) ವಿಷ ಸೇವಿಸಿದವರು.
ವಿಷ ಕುಡಿದು ಅಸ್ವಸ್ಥರಾಗಿದ್ದ ಆರು ಮಂದಿಗೆ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತಾಯಿ ಅನಿತಾ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನಿತಾ ಗರ್ಭಿಣಿಯಾಗಿದ್ದು, ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


