ಮಂಡ್ಯ: ಕೆಲವೇ ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಮಂಡ್ಯದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. 15 ಸಾವಿರ ಪೋಸ್ಟ್ ಪೂರ್ಣ ಮಾಡಲಾಗುತ್ತದೆ. ಕೆಲವೆ ದಿನಗಳ ನೋಟಿಫಿಕೇಷನ್ ಮಾಡಲಾಗುತ್ತದೆ. ಶಾಲಾ ಕೊಠಡಿಗಳ ಕೊರತೆ ಇದೆ, ಸರಿಪಡಿಸುತ್ತೇವೆ ಎಂದರು.
ಮುಂದಿನ ವರ್ಷ ಅಕಾಡೆಮಿ ಕೇರ್ ಒಳಗಡೆ NET ಅನುಷ್ಠಾನಕ್ಕೆ ತರುವ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳನ್ನ ಮುಚ್ಚಲ್ಲ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700