ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕೃಷ್ಣ(60) ಮೃತ ವ್ಯಕ್ತಿಯಾಗಿದ್ದಾರೆ.
ಬಸ್ ನಲ್ಲಿ ಕುಳಿತಿದ್ದ ವ್ಯಕ್ತಿ ದಿಢೀರ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮೆಜೆಸ್ಟಿಕ್ ನಲ್ಲಿ ಬಸ್ ಹತ್ತಿದ್ದ ಮೃತ ವ್ಯಕ್ತಿ, ರಾಜಾಜೀನಗರದ ನವರಂಗ್ ವೃತ್ತದ ಬಳಿ ಬರುತ್ತಿದ್ದ ವೇಳೆ ಸಾವು ಸಂಭವಿಸಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕಿತ್ಸೆ ಕೊಡಿಸುವಷ್ಟರಲ್ಲಿ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


